ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಬೊಮ್ಮಾಯಿ‌

ಅಂಬರೀಶ್
Advertisement

ಬೆಂಗಳೂರು: ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಇಂದು ಮೌರ್ಯ ಸರ್ಕಲ್‌ನಿಂದ ಬಸವೇಶ್ವರ್‌ ಸರ್ಕಲ್‌ ವರೆಗಿನ ರೇಸ್‌ ಕೋರ್ಸ್‌ ರಸ್ತೆಗೆ ರೆಬೆಲ್‌ ಸ್ಟಾರ್‌ ಡಾ. ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕ ಅನಾವರಣಗೊಳಿಸಿದ ಬಳಿಕ ಅವರು ಮಾತನಾಡಿದರು.
ಅಂಬರೀಶ್ ಅವರ ನೆನಪಿಗಾಗಿ ಇವತ್ತು ರೇಸ್ ಕೋರ್ಸ್ ರಸ್ತೆಯನ್ನು ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವತ್ತು ಇವರ ಹೆಸರನ್ನು ಇಟ್ಟಿದ್ದೇವೆ. ಹಲವು ಪ್ರತಿಭೆಯಿರುವ ಮೇರು ವ್ಯಕ್ತಿತ್ವ ಅವರದ್ದು. ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನು ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಅವರಿಗಿತ್ತು ಎಂದರು.