ಅಧಿಕಾರಿ ಕೊಲೆ ಪ್ರಕರಣ: ಕಾರು ಚಾಲಕ ಪೊಲೀಸ್ ವಶಕ್ಕೆ

Advertisement

ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್‌ನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು, “ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ನನ್ನು ಮಲೆಮಹದೇಶ್ವರ ದೇವಸ್ಥಾನದಲ್ಲಿ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು. ಡಿಸಿಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ. ಆತನೇ ಕೊಲೆ ಮಾಡಿದ್ದಾನೆಯೆ? ಅದಕ್ಕೆ ಕಾರಣವೇನು ? ಎಂಬುದು ವಿಚಾರಣೆಯಿಂದ ಗೊತ್ತಾಗಬೇಕಿದೆ” ಎಂದು ತಿಳಿಸಿದರು.