ಅನುಕಂಪದ ಆಧಾರದಡಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗೆ ನೇಮಕಾತಿ

Advertisement

ಬೆಂಗಳೂರು: ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಲಾಯಿತು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಚಿವ ರಾಮಲಿಂಗಾರೆಡ್ಡಿ ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಅನುಕಂಪದ ಆಧಾರದಡಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಹಾರೈಸಿದೆ.
ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮಂದಿಯನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್-2023ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಜೊತೆಗೆ, ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ-3 (ಮೇಲ್ವಿಚಾರಕೇತರ) ಹುದ್ದೆಗೆ 50 ಮಂದಿಯನ್ನು ನೇಮಕ ಮಾಡಲಾಗಿದೆ ಎಂದಿದ್ದಾರೆ.