ಅಶಿಸ್ತಿನ ವರ್ತನೆ: ಪ್ರತಿಪಕ್ಷದ 47 ಸಂಸದರು ಅಮಾನತು

Advertisement

ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಒಂದೇ ದಿನ 30 ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ಕಲಾಪದ ವೇಳೆ ಆಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಈವರೆಗೆ ಒಟ್ಟು 47 ಮಂದಿ ಅಮಾನತುಗೊಂಡಿದ್ದಾರೆ,ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಲೋಕಸಭೆಯಿಂದ ಅಮಾನತುಗೊಂಡ ಸಂಸದರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ. ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ ಮತ್ತು ಸತಾಬ್ದಿ ರಾಯ್ ಮತ್ತು ಡಿಎಂಕೆ ಸದಸ್ಯರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಕೂಡ ಪಟ್ಟಿಯಲ್ಲಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ, ಡಿಎಂಕೆಯ ಕನಿಮೋಳಿ ಮತ್ತು ಆರ್‌ಜೆಡಿಯ ಮನೋಜ್ ಕುಮಾರ್ ಝಾ ಅಮಾನತುಗೊಂಡವರಲ್ಲಿ ಸೇರಿದ್ದಾರೆ.