ಅ.13ರಂದು ಮಹಾ ಕುಂಭಮೇಳದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏನು? ಇಲ್ಲಿದೆ ಮಾಹಿತಿ

ಮಹಾ ಕುಂಭಮೇಳ
Advertisement

ಅಕ್ಟೋಬರ್ 13ರಂದು ಬೆಳಿಗ್ಗೆ 5ರಿಂದ ಬ್ರಾಹ್ಮಿ ಮೂಹೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು.
ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್ ಮೆರವಣಿಗೆ, ಸಂಜೆ 6-30 ರಾತ್ರಿ 9 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಆಳ್ವಾಸ್ ಸಂಸ್ಥೆ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಗೋಪಾಲಯ್ಯ ರವರು ಜಿಲ್ಲಾ ಉತ್ಸವ ಬೃಹತ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ವಿ. ಸುನಿಲ್‌ಕುಮಾರ್ ರವರು ಜಿಲ್ಲಾ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಡಾ.ಕೆ ಸಿ.ನಾರಾಯಣಗೌಡ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರು ಪ್ರೀತಮ್ ಜೆ. ಗೌಡ ರವರು ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರುಗಳಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ವಿಧಾನಸಭಾ ಶಾಸಕರುಗಳಾದ ಸಿ.ಎಸ್. ಪುಟ್ಟರಾಜು, ಸುರೇಶ್‍ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಎಂ ಶ್ರೀನಿವಾಸ್, ನಗರಸಭೆ ಅಧ್ಯಕ್ಷರಾದ ಹೆಚ್.ಎಸ್. ಮಂಜು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಕೆ.ಶ್ರೀನಿವಾಸ್, ಉಪಾಧ್ಯಕ್ಷರಾದ ಇಷ್ರತ್ ಫಾತಿಮಾ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಜಯರಾಂ ರಾಯಪುರರವರು ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.