ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ಬಿಡುಗಡೆ

Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.
ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ 64 ರಿಂದ ಶೇ70 ರಷ್ಟಿದೆ ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.