ಆಶಾ ಭೇಟಿ ಖುಷಿ ಕೊಟ್ಟಿದೆ ಎಂದ ಸಿಎಂ

Advertisement

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಾರ್ಥಕತೆ ಮೂಡಿಸಿದ ಆಶಾ ನೆಹರು ಪಾಟೀಲ್ ಇಂದು ಸಿಎಂರನ್ನು ಭೇಟಿಯಾಗಿದ್ದಾರೆ, ಈ ಕುರಿತು ಸ್ವತಃ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿ ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ ಎಂದಿದ್ದಾರೆ, ಅವರು ತಮ್ಮ ಸಂದೇಶದಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ. ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳು, ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮಗಳ ಮೂಲಕ ನಾಡಿನ ಜನತೆಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸ್ವಾವಲಂಬಿ ಬದುಕಿನ ಕನಸಿಗೆ ಬೆಂಬಲವಾಗಿ ನಿಂತಿದೆ. ನಮ್ಮ ಈ ಯೋಜನೆಗಳ ಫಲಾನುಭವಿಯಾದ ಪುಟ್ಟ ಹುಡುಗಿಯೊಬ್ಬಳು ನನ್ನೊಂದಿಗೆ ಪತ್ರದ ಮೂಲಕ ತನ್ನ ಸಂತಸ ಹಂಚಿಕೊಂಡು, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಳು. ಪತ್ರ ಓದಿದಾಗಿಂದ ಆ ಮಗುವನ್ನು ಒಮ್ಮೆ ಭೇಟಿಯಾಗಬೇಕೆಂದು ಬಯಸಿದ್ದೆ, ಅದು ಇಂದು ಸಾಧ್ಯವಾಯಿತು. ಇಂತಹ ಮುಗ್ಧ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ ಎಂದಿದ್ದಾರೆ.