ಆ. 11ಕ್ಕೆ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಬಿ.ವೈ ರಾಘವೇಂದ್ರ
Advertisement

ಶಿವಮೊಗ್ಗ: ನೂತನವಾಗಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ. 11ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಗೋ ಸಂಸ್ಥೆ ಈಗಾಗಲೇ ಒಪ್ಪಂದ ಮಾಡಿಕೊಂಡಿದ್ದು, ಶಿವಮೊಗ್ಗ ಹಾಗೂ ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಆರಂಭವಾಗಲಿದೆ. ಇದರೊಂದಿಗೆ 4 ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ದೆಹಲಿ-ಶಿವಮೊಗ್ಗ, ಚೆನ್ನೈ-ಶಿವಮೊಗ್ಗ, ಹೈದರಾಬಾದ್-ಶಿವಮೊಗ್ಗ, ಗೋವಾ-ಶಿವಮೊಗ್ಗ ಮತ್ತು ತಿರುಪತಿ-ಶಿವಮೊಗ್ಗ ನಡುವೆ ವಿಮಾನ ಹಾರಾಟ ನಡೆಸಲಿವೆ ಎಂದು ತಿಳಿಸಿದರು.