ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟಿದ್ದೇವೆ

Advertisement

ಬೆಂಗಳೂರು: ರಾಜ್ಯ ಸಾರಿಗೆಯ ಪಲ್ಲಕ್ಕಿ ಉತ್ಸವ ಇಂದಿನಿಂದ ಆರಂಭವಾಗಿದೆ. ವಿಧಾನಸೌಧದ ಮುಂಭಾಗ ಇಂದು ರಾಜ್ಯ ಸಾರಿಗೆಯ ಪಲ್ಲಕ್ಕಿ ಕ್ಲಾಸ್ ಬಸ್‌ಗಳು ಸೇರಿದಂತೆ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಬಸ್‌ಗಳಿಗೆ ಮುಖ್ಯಮಂತ್ರಿಗಳೊಂದಿಗೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಇದ್ದಂತೆ. ಬೆಲೆಯೇರಿಕೆ ಸಮಸ್ಯೆಗೆ ಮುಕ್ತಿ ನೀಡಿ ಆರ್ಥಿಕವಾಗಿ ಮಹಿಳೆಯರಿಗೆ ಶಕ್ತಿ ನೀಡಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಶಕ್ತಿ ಯೋಜನೆಯಡಿ ರಾಜ್ಯದ 72 ಕೋಟಿಯಷ್ಟು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಸರ್ಕಾರಿ ಸಂಸ್ಥೆಗಳು ಲಾಭದ ಜೊತೆಗೆ ನಾಡಿನ ಜನತೆಗೆ ಅನುಕೂಲ ಆಗುವ ದೃಷ್ಟಿಯಿಂದ ಜನರ ಸೇವೆಯನ್ನು ಸರ್ಕಾರ ಮಾಡುತ್ತಿದೆ.
ಇಂದಿನಿಂದ ಆರಂಭವಾಗಿರುವ ಪಲ್ಲಕ್ಕಿ ಬಸ್‌ನ ವಿಶೇಷತೆಗಳನ್ನು ವೀಕ್ಷಿಸಿದೆ. ಮನೆಯ ಯಜಮಾನಿಯರನ್ನು ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ರಾಜ್ಯ ಸಾರಿಗೆ ಬಸ್‌ಗಳು ತಲುಪಿಸುತ್ತಿವೆ. ಕೊಟ್ಟ ಮಾತು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಉತ್ತಮವಾದ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು.