ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಬೆಂಗಳೂರು: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕ ಸರ್ಕಾರ ಸಹಾಯವಾಣಿಯನ್ನು ತೆರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ. ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.