ಉಡುಪಿ ನಡುರಸ್ತೆಯಲ್ಲಿ ಗ್ಯಾಂಗ್ ವಾರ್

Advertisement

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಇಲ್ಲಿನ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ- ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಮೇ 18ರಂದು ನಡೆದಿರುವ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯ: