ಕರ್ನಾಟಕದಲ್ಲಿ ತಾಲಿಬಾನ್ ಸರಕಾರ

Advertisement

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ತಾಲಿಬಾನ್ ಸರಕಾರ ಅಧಿಕಾರ ವಹಿಸಿಕೊಂಡಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಲೋಕಸಭಾ ಚುನಾವಣೆ ಸಲುವಾಗಿ ಯಾವನೋ ಒಬ್ಬ ಅರೆಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಈ ಹುಚ್ಚರು ಕೂಡಿ ದೇಶ ಹಾಳು ಮಾಡಲು ಮುಂದಾಗಿದ್ದಾರೆ.
ಇವತ್ತು ನಡೆಯುತ್ತಿರುವ ಘಟನೆಗಳಿಂದ ಕರ್ನಾಟಕದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು ಎಂಬ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ ಎಂದು ತಿಳಿಸಿದರು. ಠಾಣೆಗೆ ಬೆಂಕಿ ಹಾಕಿದ ಪ್ರಕರಣ ವಾಪಸ್ ಪಡೆಯಲು ಸಚಿವರೇ ಪತ್ರ ಬರೆದಿದ್ದಾರೆ. ಈ ರೀತಿ ಆದರೆ ಪೊಲೀಸರು ಕೆಲಸ ಮಾಡಲು ಸಾಧ್ಯವೇ ಎಂದು ಕೇಳಿದರು. ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ದಲಿತ ಶಾಸಕನ ಮನೆ ಮೇಲಿನ ಬೆಂಕಿ ಪ್ರಕರಣವನ್ನೂ ವಾಪಸ್ ಪಡೆಯಲು ಮುಂದಾಗಿದ್ದಾರೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ನಾಶ ಮಾಡಿದ ಮತಾಂಧ ಔರಂಗಜೇಬನನ್ನು ವೈಭವೀಕರಿಸುವ ಉದ್ದೇಶವೇನು? ಕಾಂಗ್ರೆಸ್‌ ಸರ್ಕಾರ ದೇಶ ವಿಭಜನೆಯ ಸಂಚಿಗೆ ಅವಕಾಶ ಮಾಡಿಕೊಟ್ಟಿದೆ.
ರಾಜ್ಯದಲ್ಲಿ ಸಮಾಜದ ಶಾಂತಿ ಭಂಗವಾಗದ ರೀತಿಯಲ್ಲಿ ಹಿಂದೂ ಸಮಾಜವು ಗಣೇಶೋತ್ಸವ ಆಚರಿಸಿದೆ. ಸನಾತನ ಧರ್ಮದ ವಿಚಾರದಲ್ಲಿ ಬೊಬ್ಬೆ ಹಾಕುವ ಕಾಂಗ್ರೆಸ್‌ ನಾಯಕರು ಮತಾಂಧ ಶಕ್ತಿಗಳ ವಿರುದ್ಧ ಸೊಲ್ಲೆತ್ತುವುದಿಲ್ಲ ಎಂದಿದ್ದಾರೆ.