ಕರ್ನಾಟಕದ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ

Advertisement

ಬೆಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಹೇಳಿದ್ದಾರೆ.
ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಪಂಚ ಯೋಜನೆಯಿಂದ ಜನರ ಬದುಕು ಬೆಳಕಾಗಿದೆ ಎಂದು ವ್ಯಾಪಕವಾಗಿ ಶ್ಲಾಘಿಸಿದರು. ಗ್ಯಾರಂಟಿ ಯೊಜನೆಯಿಂದಾಗಿ ಜನರ ಬಳಿ ಹಣ ಬಂದಿದೆ. ರಾಜ್ಯದ ಜನ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ, ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ, ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವದರಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ, ಕಳೆದ ಬಜೆಟಿನಲ್ಲಿ ಘೋಷಿಸಿದ ಬಹುತೇಕ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ ಎಂದು ರಾಜ್ಯಪಾಲರು ಹೇಳಿದರು.