ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಪ್ರಕಟ

Advertisement

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ. ಕಾಂಗ್ರೆಸ್ ಏಳು ಪರಿಷತ್​ ಸ್ಥಾನಗಳಿಗೆ ಮಾತ್ರವಲ್ಲದೇ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್​ ಸ್ಥಾನಕ್ಕೂ ಅಭ್ಯರ್ಥಿಯನ್ನು ಘೋಷಿಸಿದೆ. ಮುಂಬರುವ ಉಪಚುನಾವಣೆಗೆ ಮಾಜಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದೆ.