ನವದೆಹಲಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.