ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ಸಿಎಂ ಸಹೋದರಿ

ಕಾಂಗ್ರೆಸ್‌
Advertisement

ತೆಲಂಗಾಣ: ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.​ ಶರ್ಮಿಳಾ ನೇಮಕಗೊಂಡಿದ್ದಾರೆ.‌

ಕಾಂಗ್ರೆಸ್ ನಾಯಕ ಗಿಡುಗು ರುದ್ರರಾಜು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ಸೋಮವಾರ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್​ನಲ್ಲಿ ಈ ಬೆಳವಣಿಗೆ ನಡೆದಿದೆ.
ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿ ಜನವರಿ 4 ರಂದು ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.