ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರಿಗಿಲ್ಲ ಕಿಮ್ಮತ್ತು

ಗೋವಿಂದ ಕಾರಜೋಳ
Advertisement

ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ನಾಯಕರು ಅಲೆಮಾರಿಗಳಾಗಿದ್ದಾರೆ. ಗೌಡರ ಲೆಕ್ಕದಲ್ಲಿಯೂ ಇಲ್ಲ, ಕುಲಕರ್ಣಿ ಪುಸ್ತಕದಲ್ಲೂ ಇಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಟೀಕಿಸಿದರು.
ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಭಾನುವಾರ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಜಮೀರ್ ಅಹ್ಮದ್‌ರಂತಹ ಸಚಿವರು ಸರ್ಕಾರದಲ್ಲಿ ಸವಾರಿ ಮಾಡುತ್ತಿದ್ದಾರೆ. ಪ್ರಸ್ತುತ ಸರ್ಕಾರದಲ್ಲಿ ೩೮ ಲಿಂಗಾಯತ ಶಾಸಕರು ಅನಾಥರಾಗಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನವನ್ನು ಮುಖ್ಯಮಂತ್ರಿಗಳು ನೀಡಿಲ್ಲ ಎಂದು ವಾಗ್ದಾಳಿ ಮಾಡಿದರು.
ವಿಪಕ್ಷ ನಾಯಕನ ಬರ ಎದುರಿಸುತ್ತಿರುವ ಬಿಜೆಪಿಯವರು ಬರ ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಿದವರು ಯಾರು ಎಂಬುದು ನನಗೆ ಗೊತ್ತಿದೆ. ಅವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಆದಷ್ಟು ಶೀಘ್ರದಲ್ಲಿಯೇ ವಿರೋಧ ಪಕ್ಷದ ನಾಯಕನನ್ನು ನಮ್ಮ ಪಕ್ಷದ ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.