ಕುಕ್ಕರ್‌ ಸ್ಫೋಟ: ಮಹಿಳೆಗೆ ಗಂಭೀರ ಗಾಯ

ಕುಕ್ಕರ್
Advertisement

ಕುಷ್ಟಗಿ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಮಾಡುವ ಕುಕ್ಕರ್ ಸ್ಫೋಟಗೊಂಡು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಗುಡದೂರುಕಲ್ಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.
ಗೌರಮ್ಮ ಹನುಮಂತಪ್ಪ ಎನ್ನುವವರೇ ಗಾಯಗೊಂಡಿದ್ದು, ಅಡುಗೆ ತಯಾರಿಸುವ ವೇಳೆ ೨೫ ಲೀಟರ್ ಸಾಮರ್ಥ್ಯದ ಕುಕ್ಕರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾಳೆ.
ಗಾಯಗೊಂಡ ಮಹಿಳೆಯನ್ನು ಕೂಡಲೇ ಕುಷ್ಟಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.