ಕುಮಾರಸ್ವಾಮಿಗೆ ಜೈಲು ಶಿಕ್ಷೆ

Advertisement

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆಯಾಗಿದೆ. ಹೂವಪ್ಪಗೌಡ ಅವರಿಂದ ಎಂ.ಪಿ.ಕುಮಾರಸ್ವಾಮಿ 1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್‌ ನೀಡಿದ್ದರು. ಆದರೆ ಈ ಎಲ್ಲಾ ಚೆಕ್‌ ಬೌನ್ಸ್‌ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂವಪ್ಪಗೌಡ ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ನ್ಯಾ.ಜೆ.ಪ್ರೀತ್ ಅವರಿಂದು ಶಿಕ್ಷೆಯ ತೀರ್ಪು ಪ್ರಕಟಿಸಿದರು. 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.