ಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು

Advertisement

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ಕಾರು ಮತ್ತು ಸರ್ಕಾರಿ ಬಸ್​ನ ನಡುವೆ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್​​​​​ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಸಿಟಿ ಬಸ್​​​​ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.