ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ
ಮತ್ತೊಬ್ಬನ ಬಂಧನ

Advertisement

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗಿರುವ ಕೆಪಿಟಿಸಿಎಲ್ ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಡಿವೈಸ್‌ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 51 ಕ್ಕೆ ಏರಿದಂತಾಗಿದೆ.

ಗೋಕಾಕ್ ತಾಲೂಕಿನ ಮಮದಾಪೂರ ರಸ್ತೆ ಉಪ್ಪಾರಟ್ಟಿಯ ಹನಮಂತ ಮಲ್ಲಪ್ಪ ಗುದಿಗೊಪ್ಪ (22).ಎಂಬುವನೆ ಬಂಧಿತ ಆರೋಪಿ.

ಈತ 2022 ಆಗಷ್ಟ 7 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ)ಯಿಂದ ನಡೆಸಲಾಗಿರುವ ಕೆಪಿಟಿಸಿಎಲ್ ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಅಕ್ರಮ ಮಾಡಲಾಗಿತ್ತು.