ಕೆಲವೇ ಗಂಟೆಗಳಲ್ಲಿ ಫಲಿತಾಂಶ

Advertisement

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಇಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಲಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಬೆಳಗ್ಗೆ 11 ಗಂಟೆಯ ಬಳಿಕ https://karresults.nic.in/ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಇನ್ನು  63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.