ಕೇಂದ್ರ ಬಜೆಟ್ ಇಂದು

Advertisement

ನವದೆಹಲಿ: ಸಾರ್ವತ್ರಿಕ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗುರುವಾರ ಬೆಳಗ್ಗೆ ೧೧ಗಂಟೆಗೆ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕಡೆಯ ಬಜೆಟ್ ಇದು.
ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವಂತಿಲ್ಲ. ಏಪ್ರಿಲ್ ೧ರ ನಂತರದ ಅವಧಿಯ ವೆಚ್ಚಗಳಿಗೆ ಈಗ ಲೇಖಾನುದಾನ ಪಡೆದುಕೊಳ್ಳಲಾಗುತ್ತದೆ.
ಈ ಬಾರಿ ಮಹತ್ವದ ಘೋಷಣೆಗಳು ಇಲ್ಲ ಎಂದು ಹಣಕಾಸು ಸಚಿವರು ಸುಳಿವು ನೀಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ಪಕ್ಷಗಳು ಸಜ್ಜಾಗುತ್ತಿರುವಾಗ, ಹೊಸದಾಗಿ ತೆರಿಗೆ ಹೊರೆಯನ್ನು ಹೇರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ನವೋದ್ಯಮ, ರಕ್ಷಣಾ ಸಾಮಗ್ರಿ ತಯಾರಿಕಾ ಕಂಪನಿಗಳು, ಹಸಿರು ಇಂಧನ ಕ್ಷೇತ್ರ, ಪ್ರವಾಸೋದ್ಯಮ, ರೈಲ್ವೆ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ದೊರೆಯಲಿದೆ ಎಂದು ಉದ್ಯಮದ ವಿಶ್ಲೇಷಕರು ಅಂದಾಜಿಸಿದ್ದಾರೆ.
ಉತ್ಪಾದನಾ ಆಧಾರಿತ ಪ್ರೋತ್ಸಾಹಧನ(ಪಿಎಲ್‌ಐ)ವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರನೇ ಬಾರಿ ಬಜೆಟ್ ಮಂಡಿಸುತ್ತಿದ್ದು, ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.