ಕೊಪ್ಪಳ: ಎಸ್ ಎಸ್ ಎಲ್ ಸಿ ಪರೀಕ್ಷೆ: ಸಾಮೂಹಿಕ ನಕಲು!

COPY
Advertisement

ಕುಷ್ಟಗಿ: ತಾಲೂಕಿನ ತಾವರಗೇರಾ ಪಟ್ಟಣದ ಶಶಿಧರ ಸ್ವಾಮಿ ವಿದ್ಯಾನಿಕೇತನ ಜೂನಿಯರ್ ಕಾಲೇಜಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯಕ್ಕೆ ಸಂಬಂಧಪಟ್ಟಂತೆ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಲು ಶಿಕ್ಷಕರೇ ಸಾಥ್‌ ಕೊಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಈ ಪರೀಕ್ಷಾ ಕೇಂದ್ರದ ಬಳಿ ಒಂದು ಜೆರಾಕ್ಸ್ ಕಂಡಿದ್ದು ಆ ಜೆರಾಕ್ಸ್ ಅಂಗಡಿಯಲ್ಲಿ ಇರುವಂತಹ ಒಂದು ಕೋಣೆಯಲ್ಲಿ ಶಿಕ್ಷಕರು ಗಣಿತ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಿರುವುದು ಕಂಡು ಬಂದಿದೆ. ಇತಕಡೆ ಶಿಕ್ಷಣ ಇಲಾಖೆ ನಕಲು ಮುಕ್ತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮಾಡುತ್ತೇವೆ ಎಂದು ಬೊಬ್ಬೆ ಹೊಡೆಯುತ್ತಿದ್ದರು ಸಹ. ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವುದು ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಾರದೇ ಇರುವುದು ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಭೇಟಿ: ತಾವರಗೇರಾ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ಡಿಡಿಪಿಐ ಮುತ್ತು ರೆಡ್ಡಿ ಮತ್ತು ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ನಾನು ಸಂದರ್ಶನ ಮಾಡಿದ ಸಮಯದಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪರೀಕ್ಷೆ ಬರೆಯುತ್ತಿರುವುದು ಕಂಡಿದ್ದೇನೆ. ಪರೀಕ್ಷೆ ಕೇಂದ್ರಕ್ಕೆ ಹೋಗುವ ಮೊದಲೇ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಅವರು 40 ನಿಮಿಷ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಾರೆ. ಒಂದು ವೇಳೆ ನಕಲು ಮಾಡಿರುವುದು ಸ್ಪಷ್ಟವಾಗಿ ಕಂಡು ಬಂದರೆ ವರದಿ ನೀಡುವಂತೆ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಡಿಡಿಪಿಐ ಮುತ್ತು ರೆಡ್ಡಿ ತಿಳಿಸಿದರು.