ತುಮಕೂರು: ನಿಂತಿದ್ದ ಕ್ರೂಸರ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಕೋರಾ ಬಳಿಯ ರಾ.ಹೆ.48ರಲ್ಲಿ ಕ್ರೂಸರ್ಗೆ ಲಾರಿ ಡಿಕ್ಕಿಯಾಗಿದ್ದು, ಗಂಗಾವತಿ ಮೂಲದ ಶಂಕರ್(35), ಸತೀಶ್(40) ಮೃತ ದುರ್ದೈವಿಗಳು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.