ಖ್ಯಾತ ಗಣಿತ ಶಾಸ್ತ್ರಜ್ಞ ಸಿಆರ್ ರಾವ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Advertisement

ಬೆಂಗಳೂರು: ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು. ‘ಪದ್ಮವಿಭೂಷಣ’ ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದ್ದರು. ಗಣಿತ ಮತ್ತು ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿದೆ.
ಸಿ.ಆರ್ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ, “ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.” ಎಂದಿದ್ದಾರೆ.