ಖ್ಯಾತ ಸಾಹಿತಿ ಅಮೃತ ಸೋಮೇಶ್ವರ ಇನ್ನಿಲ್ಲ

Advertisement

ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(89) ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟೆಂಬರ್ 27 ರಂದು ಜನಿಸಿದ ಸೋಮೇಶ್ವರ ಅವರು ಪ್ರಾರಂಭಿಕ ಶಿಕ್ಷಣವನ್ನು ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದರು. ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ, ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಸಂಘ, ಯಕ್ಷಗಾನ ಸಂಘ ಆರಂಭಿಸಿ ತುಳು ಭಾಷೆಯ ಬೆಳವಣಿಗೆಗಾಗಿ ಶ್ರಮಿಸಿದ ಅಮೃತ ಸೋಮೇಶ್ವರ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದರು. ತುಳುನಾಡಿನ ಸಂಸ್ಕ್ರತಿ ಮತ್ತು ಕಲೆಯ ಬಗೆಗೆ ವಿಶೇಷ ಒಲವುಳ್ಳವರು. ಅವರ ಮೊದಲ ಕೃತಿ ‘ಎಲೆಗಿಳಿ’ ಎಂಬ ಸಣ್ಣಕತೆಗಳ ಸoಕಲನ 1957ರಲ್ಲಿ ಪ್ರಕಟವಾಯಿತು. ಅಮೃತ ಸೋಮೇಶ್ವರ ಅವರು ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿ ಕರ್ನಾಟಕದ ಜನರಿಗೆ ಚಿರಪರಿಚಿತರಾಗಿದ್ದರು.