ಗಾಣಿಗ ನಿಗಮ ಮಂಡಳಿ ಸ್ಥಾಪನೆಗೆ ಹರ್ಷ

ಗಾಣಿಗ
Advertisement

ಕುಷ್ಟಗಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ನನಗೆ ಗಾಣಿಗ ಸಮಾಜದ ಪ್ರತಿಯೊಬ್ಬರು ಸಹ ಮತ ಹಾಕುವುದರ ಮೂಲಕ ನನ್ನ ಗೆಲುವಿಗೆ ಕಾರಣಿಭೂತರಾಗಬೇಕು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದ ಬಿಜೆಪಿಯ ಅಂಜನಾದ್ರಿ ಕಚೇರಿಯಲ್ಲಿ ಬಿಜೆಪಿ ಸರ್ಕಾರ ಕರ್ನಾಟಕ ಗಾಣಿಗ ನಿಗಮ ಮಂಡಳಿಯನ್ನು ಸ್ಥಾಪಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಗಾಣಿಗ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗಾಣಿಗ ಸಮಾಜ ಅಭಿವೃದ್ಧಿ ಹೊಂದಬೇಕೆಂಬ ಉದ್ದೇಶದಿಂದಾಗಿ ಸರ್ಕಾರ ಸಮುದಾಯಕ್ಕೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ನಿಜಕ್ಕೂ ಒಳ್ಳೆಯ ವಿಷಯವಾಗಿದೆ. ಮುಂದಿನ ಚುನಾವಣೆಯಲ್ಲಿ ಗಾಣಿಗ ಸಮಾಜದ ಬಾಂಧವರು ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡುವುದರ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿ ಎಂದರು.