ಗೃಹಲಕ್ಷ್ಮಿ ಯೋಜನೆ: ಜುಲೈ 19 ರಿಂದ ನೋಂದಣಿ ಆರಂಭ

Advertisement

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ, ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್​ಟಿ ಪಾವತಿದಾರರಾಗಿರತಕ್ಕದ್ದಲ್ಲ. ರೇಷನ್ ಕಾರ್ಡ್​ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್​ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರನ್ನು ಆಹ್ವಾನ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಆಗಸ್ಟ್​ 16 ಅಥವಾ 17ರಂದು ಯಜಮಾನಿ ಖಾತೆಗೆ ಹಣ ಹಾಕುತ್ತೇವೆ ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ಮಹಿಳೆಯರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.