ಗ್ಯಾರಂಟಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ

Advertisement

ಬೆಂಗಳೂರು: ನನ್ನ ಹೇಳಿಕೆಯಿಂದ ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ
ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಮಹಿಳೆಯರನ್ನೂ ನಾನು ಅವಮಾನಿಸಿಲ್ಲ. ನಾನು ಚುನಾವಣಾ ಪ್ರಚಾರ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ್ದೇನೆಯೇ ಹೊರತು ಮಹಿಳೆಯರನ್ನು ಅವಮಾನ ಮಾಡಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಮಾರುಹೋಗಿ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರಿಂದ ರಾಜ್ಯದ ಸಂಪತ್ತಿನ ಲೂಟಿ ಮತ್ತು ಸಾಲದ ಹೊರೆ ಹೆಚ್ಚಳ ಆಗಿರುವ ಕುರಿತು ಎಚ್ಚರಿಸಿದ್ದೆನೆ ಆದರೆ ಅದನ್ನು ತಪ್ಪಾಗಿ ಬಿಂಬಿಸಲಾಗಿದೆ. 2,000 ಕೊಟ್ಟು ದುಡಿಯುವ ಜನರಿಂದ 5,000 ಕಿಸೆಗಳವು ಮಾಡುತ್ತಾರೆ ಎಂಬುದನ್ನು ಹೇಳಿದ್ದೆ. ನಮ್ಮ ಆಡಳಿತ ಕಾಲದಲ್ಲಿ ಮಹಿಳೆಯರನ್ನು ಗೌರವಿಸಿ ಸಾರಾಯಿ ನಿಷೇಧ ಮಾಡಿದ್ದೆ. ಮಹಿಳೆಯರ ಕುರಿತು ಎಲ್ಲಿಯೂ ಅವಮಾನಕರ ಪದಗಳನ್ನು ಬಳಸಿಲ್ಲ. ತಾಯಂದಿರು ಎಂಬ ಗೌರವಸೂಚಕ ಪದವನ್ನು ಬಳಸಿಯೇ ಮಾತನಾಡಿದ್ದೇನೆ. ದಾರಿ ತಪ್ಪಿದ್ದಾರೆ ಎಂಬುದು ಅಶ್ಲೀಲ ಪದವಲ್ಲ. ಮನೆಯಲ್ಲಿ ಮಕ್ಕಳಿಗೆ ದಾರಿ ತಪ್ಪಬೇಡಿ ಎಂದು ಹೇಳುವುದಿಲ್ಲವೆ? ಅದು ಹೇಗೆ ತಪ್ಪಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.