ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆಗೆ ಹೆರಿಗೆಯ ಸಂಭ್ರಮ

Advertisement

ಶಿವಮೊಗ್ಗ : ಜಂಬೂ ಸವಾರಿಗೆ ಆಗಮಿಸಿದ ನೇತ್ರಾವತಿ ಆನೆ (28) ಹೆಣ್ಣು ಮರಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. ಶಿವಮೊಗ್ಗ ನಗರದ ಮೆರವಣಿಗೆ ಮಾರ್ಗದಲ್ಲಿ ಬೆಳಗ್ಗೆ ಸಂಜೆ ತಾಲೀಮು ನಡೆಸಲಾಗುತಿತ್ತು. ನಿನ್ನೆ ಸಂಜೆ ಕೂಡ ತಾಲೀಮು ಮುಗಿಸಿ ವಾಸವಿ ಶಾಲೆ ಆವರಣದಲ್ಲಿ ಬೀಡು ಬಿಟ್ಟಿದ್ದವು ಸೋಮವಾರ ತಡರಾತ್ರಿ ನೇತ್ರಾವತಿ ಆನೆ ಮರಿಗೆ ಜನ್ಮ ನೀಡಿದೆ. ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಸಾಗರ್, ಹೇಮಾವತಿ ಹಾಗೂ ನೇತ್ರಾವತಿ ಆನೆಗಳನ್ನು ಕರೆತರಲಾಗಿತ್ತು. ವಾಸವಿ ಶಾಲೆ ಆವರಣದಲ್ಲಿ ಆನೆಗಳು ತಂಗಿದ್ದವು. ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದ ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು, ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.