ಜೆಡಿಎಸ್‌ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ

Advertisement

ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ ಎಂದರು. ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ.

ಬೆಂಗಳೂರು: ಜೆಡಿಎಸ್ ಎಲ್ಲಿದೆ? ಜೆಡಿಎಸ್‌ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ ಎಂದರು. ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲಾ ವರ್ಗದ ಜನ ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾಮೀಜಿಗಳು ಕೃಷ್ಣನಂತೆ ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್‌ನವರು ಮಾಡಿದ್ದಾರೆ ಎಂದರು.