ಜೈನಮುನಿ ಹತ್ಯೆ ಪ್ರಕರಣ CID ತನಿಖೆಗೆ

Advertisement

ಬೆಂಗಳೂರು: ಜೈನ ಮುನಿ ಕಾಮಕುಮಾರ ನಂದಿಮಹಾರಾಜ ಭೀಕರ ಹತ್ಯೆ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹತ್ಯೆ ಪ್ರಕರಣ ಸೂಕ್ಷ್ಮವಾಗಿರುವುದರಿಂದ, ಸಾರ್ವಜನಿಕರ ಕೋರಿಕೆಯ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ‌ನೀಡಬೇಕು ಎಂದು‌ ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸರ್ಕಾರ ಸಿಐಡಿ ತನಿಖೆಗೆ ನೀಡಲು ನಿರ್ಧಾರ ಮಾಡಿದೆ ಎಂದು ತಿಳಿಸಿದರು.