ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಕೊಲೆ

ಆಭರಣ
Advertisement

ಮಂಗಳೂರು: ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಮಂಗಳೂರು ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ(50) ಎಂದು ಗುರುತಿಸಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ ನಡೆಯುತ್ತಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಜ್ಯುವೆಲ್ಲರಿ ಅಂಗಡಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವುದು ಕಂಡು ಬಂದಿದೆ.
ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರು. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು, ದುಷ್ಕರ್ಮಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ.