ಟಿಪ್ಪು ಜಯಂತಿ ಆಚರಣೆ ವಿರೋಧ: ಮುತಾಲಿಕ್‌ ಸೇರಿ ಹಲವು ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಮುತಾಲಿಕ್‌
Advertisement

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮುತ್ತಿಗೆ ಹಾಕಲು ಆಗಮಿಸಿದ ಪ್ರಮೋದ್‌ ಮುತಾಲಿಕ್‌ ಅವರನ್ನು ಪೊಲೀಸ್‌ ವಶಕ್ಕೆ ಪಡೆದರು.
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವಿರೋಧೀಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿ ಹಲವರು ಪೊಲೀಸರ ವಶಕ್ಕೆ. ಕೆಲ ಹೊತ್ತು ಚನ್ನಮ್ಮ ವೃತ್ತದಲ್ಲಿ ಮಾತಿನ ಚಕಮಕಿ, ಟಿಪ್ಪು ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಸುತ್ತಲೂ ಪೊಲೀಸರು ಸರ್ಪಗಾವಲು. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಹಿಂದು ಮತ್ತು ಕನ್ನಡ ವಿರೋಧಿ ಆತ, ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು. ಆತ ದೇಶದ್ರೋಹಿ ಇದ್ದಾನೆ. ಯಾರ ಜಯಂತಿ ಮಾಡಿ ಆದರೆ ಟಿಪ್ಪು ಜಯಂತಿ ಮಾಡಬೇಡಿ.
ಮಹಾನಗರ ಪಾಲಿಕೆ ತೆಗೆದುಕೊಂಡ ನಿಲುವನ್ನು ಖಂಡಿಸುತ್ತೇವೆ. ಟಿಪ್ಪು ಸುಲ್ತಾನ್ ಜಯಂತಿ ಬ್ಯಾನ್ ಮಾಡಲಾಗಿದೆ. ಯಾಕೆ ಅವಕಾಶ ಮಾಡಿಕೊಟ್ಟಿರಿ, Aimim ದೇಶ ದ್ರೋಹಿ ಪಕ್ಷ. ದೇಶದ್ರೋಹಿಗಳನ್ನು ಬಿಜೆಪಿ ಬೆಳೆಸುತ್ತಿದೆ. ಇದಕ್ಕೆ ನಮ್ಮ ವಿರೋಧ ವಿದೆ. ಮತಾಂತರ ಮಾಡಿದವರ ಜಯಂತಿ ಆಚರಣೆ ಸರಿಯಲ್ಲ. ಯಾವುದೇ ಹೋಲಿಕೆ ಮಾಡಲು ಸಾಧ್ಯವಿಲ್ಲ. ಟಿಪ್ಪು ಜಯಂತಿ ಆಚರಣೆ ಬೇಡವೆಂದು ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗುವುದು ಎಂದರು.