ಟಿ20 ವಿಶ್ವಕಪ್‌: ಇಂಗ್ಲೆಂಡ್‌ ಚಾಂಪಿಯನ್‌

ಇಂಗ್ಲೆಂಡ್‌
Advertisement

ಮೆಲ್ಬರ್ನ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ ಅಂತರದ ಗೆಲುವು ದಾಖಲಿಸುವ ಮೂಲಕ ಇಂಗ್ಲೆಂಡ್ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಎರಡನೇ ಬಾರಿಗೆ ಟ್ವೆಂಟಿ-20 ವಿಶ್ವಕಪ್ ಗೆದ್ದ ಎರಡನೇ ತಂಡವಾಗಿ ಇಂಗ್ಲೆಂಡ್‌ ಸಾಧನೆ ಮಾಡಿತು. ಈ ಹಿಂದೆ 2010ರಲ್ಲಿ ಇಂಗ್ಲೆಂಡ್ ಚಾಂಪಿಯನ್ ಎನಿಸಿಕೊಂಡಿತು.
ಮೊದಲ ಟಾಸ್‌ ಸೋತು ಬ್ಯಾಟ್‌ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 137 ರನ್‌ ಗಳಿಸಿತ್ತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಇನ್ನೂ ಆರು ಎಸೆತಗಳು ಬಾಕಿ ಉಳಿದಿರುವಂತೆಯೇ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.