ಡಿ ಕೆ ಶಿವಕುಮಾರ್‌ಗೆ ಮಾತನಾಡಲು ವಿಷಯವಿಲ್ಲದೆ ಅನಗತ್ಯ ಆರೋಪ

CM
Advertisement

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮಾತನಾಡಲು ಯಾವುದೇ ವಿಷಯ ಇಲ್ಲದಿರುವುದರಿಂದ ಅನಗತ್ಯ ಆರೋಪ ಮಾಡುತ್ತಿದ್ದು, ಯಾರ ನಾಮಪತ್ರವೂ ತಿರಸ್ಕೃತವಾಗಿಲ್ಲದಿರುವುದೇ ಆರೋಪ ಸುಳ್ಳು ಎನ್ನಲು ಸಾಕ್ಷಿ. ನಿನ್ನೆಯೇ ಎಲ್ಲಾ ಪ್ರಕ್ರಿಯೆ ಮುಗಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಸಿಂಧು ಮಾಡಲು ಸಿಎಂ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರೂ ಯಡಿಯೂರಪ್ಪನವರನ್ನು ಮುಗಿಸುತ್ತಾರೆ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ
ಸಿದ್ದರಾಮಯ್ಯನವರನ್ನು ಹೇಗೆ ಮುಗಿಸಿದ್ದಾರೆ ಎಂದು ಗೊತ್ತಿಲ್ವಾ? ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಮುಗಿಸಿದರು. ಈ ಬಾರಿ ವರುಣಾದಲ್ಲಿ ಮುಗಿಸಲು ಏನು ಹುನ್ನಾರ ಮಾಡಿದ್ದಾರೆ ಎನ್ನುವುದು ಜಗ್ಗತ್ತಿಗೆ ಗೊತ್ತಿಗೆ ಎಂದರು. ಈ ರೀತಿ ಮಾತುಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲ
ಲಿಂಗಾಯತ ಅಣೆಕಟ್ಟು ಒಡೆದು ಹರಿದು ಕಾಂಗ್ರೆಸ್ ಎಂಬ ಸಮುದ್ರ ಸೇರಲಿದೆ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಉತ್ತರಿಸಿ ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲ.ಮೊದಲು ಅದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದ ಸಿಎಂ, 2013 ರಲ್ಲಿ ಲಿಂಗಾಯತ ಸಮುದಾಯ ವಿಭಜನೆ ಆಗಿಲ್ಲ. ಅದು ರಾಜಕೀಯ ಪಕ್ಷವಾಯಿತು ಅಷ್ಟೇ. ಲಿಂಗಾಯತ ಮತದಾರರು ಯಾವಾಗಲೂ ಪ್ರಬದ್ದರಾಗಿದ್ದಾರೆ ಎಂದರು. ಲಿಂಗಾಯತರು ಜಾಗೃತಿರಾಗಿ ಮತಷ್ಟು ಗಟ್ಟಿಯಾಗಿದ್ದಾರೆ ಲಿಂಗಾಯತರನ್ನು ಗಟ್ಟಿ ಮಾಡುವ ಕೆಲಸ ಡಿ.ಕೆ.ಶಿವಕುಮಾರ್ ಅವರು ಮಾಡುತ್ತಿದ್ದಾರೆ ಎಂದರು.
ಸವದತ್ತಿ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸರಿ ಇಲ್ಲ ಎಂಬ ಆರೋಪ ವಿಚಾರವಾಗಿ ಮಾತನಾಡಿ, ಎಲ್ಲವೂ ಚುನಾವಣಾ ಅಧಿಕಾರಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ. ಯಾವುದೇ ಪಕ್ಷವೂ ಏನೂ ಮಾಡಲು ಆಗುವುದಿಲ್ಲ. ಎಲ್ಲಾ ಪ್ರಕ್ರಿಯೆಗಳ ವಿಡಿಯೋ ಚಿತ್ರೀಕರಣ ಆಗಿದೆ ಎಂದರು.
ಸುದೀಪ್ ಪ್ರಚಾರ ವಿಚಾರ
ಸುದೀಪ್ ಮತ್ತೆ ಪ್ರಚಾರ ಮಾಡಲಿದ್ದು, ಸುದೀಪ್ ಪ್ರಚಾರದ ವಿವರ ಒಂದೆರಡು ದಿನದಲ್ಲಿ ಅಂತಿಮಗೊಳ್ಳಲಿದೆ ಎಂದರು.
ನಾಳೆಯಿಂದ ರೋಡ್ ಶೋ
ಚುನಾವಣಾ ರೋಡ್ ಶೋ ನಾಳೆಯಿಂದ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಯಲಹಂಕದಿಂದ ರೋಡ್ ಶೋ ಆರಂಭವಾಗಲಿದೆ. ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ಅರಸಿಕೆರೆ ನಂತರ ಬೆಳಗಾವಿ ವಿಭಾಗ, ಗುಲಬರ್ಗಾ ವಿಭಾಗ ಹಾಗೂ ಮೈಸೂರು ಭಾಗಗಳಲ್ಲೂ ಚುನಾವಣಾ ಯಾತ್ರೆ ಹಾಗೂ ರೋಡ್ ಶೋಗಳನ್ನು ನಡೆಸಲಿದ್ದೇನೆ ಎಂದರು.
ಪ್ರಧಾನಿಗಳ ಪ್ರವಾಸ
ರಾಜ್ಯದಲ್ಲಿ ಪ್ರಧಾನಿಗಳ ಪ್ರವಾಸದ ವಿಚಾರವಾಗಿ ಮಾತನಾಡಿ, ಪಕ್ಷ ಎಲ್ಲವನ್ನೂ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.