ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆಯಲ್ಲಿ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ವಾದ- ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಸಿಬಿಐ ವಾದವನ್ನು ಹೈಕೋರ್ಟ್ ವಿಭಾಗೀಯ ಪೀಠ ತಳ್ಳಿ ಹಾಕಿದೆ. ಈ ಮೂಲಕ ಡಿಕೆಶಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.