ಡಿ.ಕೆ. ಶಿವಕುಮಾರ್ ಈಸ್ ಕ್ಲೀನ್: ಸುರ್ಜೇವಾಲ

Advertisement


ದಾವಣಗೆರೆ: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿ ಪಾದಯಾತ್ರೆ ನಿಲ್ಲಿಸುವ ಉದ್ದೇಶದಿಂದಲೇ ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಈಸ್ ಕ್ಲೀನ್ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳುವ ಮೂಲಕ ಸಮರ್ಥಿಸಿಕೊಂಡರು.
ಭಾನುವಾರ ಬಾಪೂಜಿ ಅತಿಥಿ ಗೃಹದಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ತೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಜಾರಿ ನಿರ್ದೇಶನಾಲಯ ಮೂರು ಬಾರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರಿಗೆ ನೊಟೀಸ್ ನೀಡಿದೆ. ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ, ತನಿಖೆಗೆ ಒಳಪಡಿಸಿಲ್ಲ ಎಂದು ಪ್ರಶ್ನಿಸಿದರು.
ಪಿಎಸ್‌ಐ ಹಗರಣ ನಡೆದಿದ್ದರೂ ಗೃಹ ಸಚಿವರಿಗೆ ಯಾಕೆ ನೊಟೀಸ್ ನೀಡಿಲ್ಲ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡರೂ ಆರೋಪ ಹೊತ್ತ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ. ಶೇ. 40ರಷ್ಟು ಕಮೀಷನ್ ಕೇಳುತ್ತಾರೆಂದು ಸ್ವತಃ ಗುತ್ತಿಗೆದಾರರ ಸಂಘವೇ ಆರೋಪಿಸಿದೆ. ಆ ಸಚಿವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿ ಕಿರುಕುಳ ನೀಡಲಾಗುತ್ತಿದೆ. ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ. ಸಿಬಿಐ ಅಂದರೆ ಕ್ಯಾಪಿಟಲ್ ಬ್ಯರೋ ಇನ್ ವೆಸ್ಟಿಗೇಶನ್ ಆಗಿದೆ. ಇ ಡಿ. ಬಿಜೆಪಿಯ ಚುನಾವಣಾ ಸಂಸ್ಥೆಯAತೆ ಕಾರ್ಯ ನಿರ್ವಹಿಸುತ್ತಿದೆ ಎಂದು ಟೀಕಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ನಾಯಕರಾದ ಸಲೀಂ ಆಹ್ಮದ್, ಆರ್. ದ್ರುವನಾರಾಯಣ, ಎಸ್.ಎಸ್. ಮಲ್ಲಿಕಾರ್ಜುನ ಮತ್ತಿತರರಿದ್ದರು.