ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ.
ಬೆಳಗ್ಗೆಯಿಂದ ಯಶವಂತಪುರದಿಂದ ನಾಗಸಂದ್ರ ಹಾಗೂ ನಾಗಸಂದ್ರದಿಂದ ಯಶವಂತಪುರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ನಾಗಸಂದ್ರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ.