ತುರ್ತಾಗಿ ಬೇಕಾಗಿದ್ದಾರೆ

Advertisement

ಬೆಂಗಳೂರು: ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ, ಅವರು ತಮ್ಮ ಟ್ವೀಟ್‌ನಲ್ಲಿ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
🔹ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಟ್ವೀಟ್‌ ಮಾಡಿ ಬಿಜೆಪಿ ಕುರಿತು ವ್ಯಂಗ್ಯವಾಡಿದೆ.