ಕೇಪ್ಟೌನ್: ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ಅಲ್ಪಮೊತ್ತಕ್ಕೆ ಆಲೌಟ್ ಆಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೀನ್ ಎಲ್ಗರ್ ಪಡೆ ಕೇವಲ 23.2 ಓವರ್ಗಳಲ್ಲಿ 55 ರನ್ಗಳಿಗೆ ಆಲೌಟ್ ಆಗಿ ಮೊದಲ ಇನ್ನಿಂಗ್ಸ್ ಮುಗಿಸಿದೆ.
ದಕ್ಷಿಣ ಆಫ್ರಿಕಾ ಪರ ಕೈಲ್ ವೆರೆನ್ನೆ (15), ಡೇವಿಡ್ ಬೆಡಿಂಗ್ಹ್ಯಾಮ್ (12) ಹೊರತುಪಡಿಸಿದರೆ, ಬೇರೆ ಯಾವ ಬ್ಯಾಟರ್ಗಳು ಕೂಡಾ ಎರಡಂಕಿ ಮೊತ್ತ ಗಳಿಸಿಲ್ಲ. ಕೇವಲ 9 ಓವರ್ ಬೌಲಿಂಗ್ ಮಾಡಿದ ಸಿರಾಜ್ 15 ರನ್ ಮಾತ್ರ ಬಿಟ್ಟುಕೊಟ್ಟು 6 ವಿಕೆಟ್ ಕಬಳಿಸಿದರು. ಜಸ್ಪ್ರೀತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ಕೂಡಾ ತಲಾ ಎರಡು ವಿಕೆಟ್ ಪಡೆದರು.