ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ

Advertisement

ನವದೆಹಲಿ: ದೆಹಲಿಯ ಐವತ್ತಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶದ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಎಲ್ಲೆಡೆ ಒಂದೇ ಇಮೇಲ್ ಕಳುಹಿಸಲಾಗಿದೆ.
ಶಾಲೆಯ ಆವರಣದಲ್ಲಿ ಸಂಪೂರ್ಣ ಶೋಧ ನಡೆಸಲಾಗಿತ್ತಾದರೂ ಯಾವುದೇ ಅನುಮಾನಾಸ್ಪದವಾಗಿ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿಪಿಎಸ್ ನೋಯ್ಡಾದ ಪ್ರಾಂಶುಪಾಲರು‌ ಮಾತನಾಡಿ, ನೋಯ್ಡಾದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ವಿದ್ಯಾರ್ಥಿಗಳ ಸುರಕ್ಷತೆಗೆ ಬೆದರಿಕೆ ಹಾಕುವ ಇಮೇಲ್ ಬಂದಿದೆ ಮುನ್ನೆಚ್ಚರಿಕೆ ಕ್ರಮವಾಗಿ ನಾವು ವಿದ್ಯಾರ್ಥಿಗಳನ್ನು ತಕ್ಷಣ ಮನೆಗೆ ಕಳುಹಿಸುತ್ತಿದ್ದೇವೆ ಎಂದು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ, ಇನ್ನೂ ಯಾವುದೇ ಸಂಶಯಾಸ್ಪದ ಬೆಳವಣಿಗೆ ಪತ್ತೆಯಾಗಿಲ್ಲ, ಇಮೇಲ್ ಬಂದ ಐಪಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಇನ್ನು ಈ ಕುರಿತಂತೆ ದೆಹಲಿ ಆಪ್‌ ಸಚಿವೆ ಅತಿಶಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಇಂದು ಬೆಳಗ್ಗೆ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ, ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ ಮತ್ತು ಆ ಆವರಣಗಳನ್ನು ದೆಹಲಿ ಪೊಲೀಸರು ಶೋಧಿಸುತ್ತಿದ್ದಾರೆ. ಇದುವರೆಗೆ ಯಾವುದೇ ಶಾಲೆಗಳಲ್ಲಿ ಅನುಮಾನಸ್ಪದ ವಸ್ತುಗಳು ಕಂಡುಬಂದಿಲ್ಲ. ನಾವು ಪೊಲೀಸರು ಮತ್ತು ಶಾಲೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಪೋಷಕರು ಮತ್ತು ನಾಗರಿಕರು ಭಯಪಡಬೇಡಿ ಎಂದಿದ್ದಾರೆ.