ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ

siddu
Advertisement

ಬೆಂಗಳೂರು: ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.
ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.