ದೋಣಿ ಮುಳುಗಡೆ: ೭ ಮಂದಿ ಮೀನುಗಾರರ ರಕ್ಷಣೆ

ದೋಣಿ ಮುಳುಗಡೆ
Advertisement

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, ೭ ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಪಡುಬಿದ್ರಿ ಸಮೀಪದ ಉಚ್ಚಿಲದಲ್ಲಿ ಇಂದು ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ. ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ ೭ ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ. ಮೀನುಗಾರಿಕೆ ನಡೆಸುತ್ತಿದ್ದ ದೋಣಿಗಳಲ್ಲಿ ೭ ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ರವರು ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.