ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ

Advertisement

ಬೆಂಗಳೂರು: ದ್ವಿತೀಯ ಪಿಯುಸಿ 3ನೇ ಪೂರಕ ಪರೀಕ್ಷೆಯು ಜೂನ್‌ 24ರಿಂದ ಜುಲೈ 5ರವರೆಗೆ ನಡೆಯಲಿದೆ.
ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿಗೆ ಅವಕಾಶವಿದ್ದು, ದಂಡ ಸಹಿತ ಮೇ 29ರಿಂದ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಜೂನ್‌ 24- ಕನ್ನಡ, ಜೂನ್‌ 25- ಇಂಗ್ಲೀಷ್‌, ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ, ಜೂನ್‌ 29 – ಇತಿಹಾಸ, ಭೌತಶಾಸ್ತ್ರ, ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ, ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌