ಧರೆ ಹೊತ್ತಿ ಉರಿದರೆ ನಿಲ್ಲದು: ಕೋಡಿ ಶ್ರೀ ಭಯಾನಕ ಭವಿಷ್ಯ

Advertisement

ವಿಜಯನಗರ: ಒಲೆ ಹೊತ್ತಿ ಉರಿದರೆ, ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು ಎಂದು ಮಾರ್ಮಿಕವಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ‌ ಸಂಯುಕ್ತ ಅವರ ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, 2023ಕ್ಕೆ ಜಾಗತಿಕದಲ್ಲಿ ಈ ರೀತಿ ಸಮಸ್ಯೆ ಎದುರಾಗಲಿದೆ ಎಂದಿದ್ದಾರೆ. ಸಾಧು ಸಂತರಿಗೆ ಸಮಸ್ಯೆಯಾಗೋದಿದೆ. ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ. ಎರಡ್ಮೂರು ದೊಡ್ಡ-ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ‌ಕ್ಕೆ ಬರುವುದಿಲ್ಲ. ಕೊರೊನಾ ಬಂದ್ರೂ ಕೂಡ ಅಂತಹ ತೊಂದರೆಯಾಗುವುದಿಲ್ಲ. ಸಂಕ್ರಾಂತಿ-ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಹೇಗೆ, ಆಯಿತು ಹಾಗೆ ಆಗುತ್ತದೆ ಎಂದು ಶ್ರೀಗಳು ಹೇಳಿದ್ದಾರೆ.