ನಂಬರ್‌ 1 ಸ್ಥಾನಕ್ಕೇರಿದ ಶುಭ್ಮನ್‌ ಗಿಲ್, ಸಿರಾಜ್

Advertisement

ಐಸಿಸಿ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಗಿಲ್‌ ಅಗ್ರಸ್ಥಾನಕ್ಕೇರಿದ್ದಾರೆ. ಏಕದಿನ ಶ್ರೇಯಾಂಕದಲ್ಲಿ ಶುಭ್ಮನ್ ಗಿಲ್ ಮೊದಲ ಸ್ಥಾನಕ್ಕೇರಿದ್ದು. ಆ ಮೂಲಕ ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನಂತರ ಏಕದಿನ ಕ್ರಿಕೆಟ್‌ನಲ್ಲಿ ನಂಬರ್‌ ವನ್‌ ಸ್ಥಾನ ಪಡೆದ ಭಾರತದ ನಾಲ್ಕನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು. ಇನ್ನು ಸಿರಾಜ್ ನಂ.1 ಬೌಲರ್ ಆಗಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ವಿಶ್ವದ ನಂಬರ್ 1 ಬೌಲರ್ ಆಗಿ ರೂಪುಗೊಂಡಿದ್ದಾರೆ.