ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.?

Advertisement

ಬೆಂಗಳೂರು: ಅಶೋಕ್‌ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.? ಎಂದು ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದ್ದಾರೆ
ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಉತ್ತರಕಾಂಡದ BJP ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್‌ ಅಶೋಕ್‌ ಪತಂಜಲಿ ಸಂಸ್ಥೆ ‌ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು. ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್‌ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.? ಸುಳ್ಳು ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ ಬಾಬಾ ರಾಮದೇವ ಹಾಗೂ ಆಚಾರ್ಯ ಬಾಲಕೃಷ್ಣ ಒಡೆತನದ ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸರ್ವೋಚ್ಚ ನ್ಯಾಯಾಲಯವೇ ಪತಂಜಲಿ ಸಂಸ್ಥೆಯ ವಿಶ್ವಾಸರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಗ ವಿಪಕ್ಷ ನಾಯಕ ಆರ್‌ ಅಶೋಕ ಪತಂಜಲಿ ಜನ ಮೆಚ್ಚಿದ ಬ್ರ್ಯಾಂಡ್ ಎಂದು ಸರ್ಟಿಫಿಕೇಟ್ ಕೊಟ್ಟಿದ್ದರು.
ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸುವುದೇ ಅಪರಾಧವೆಂಬಂತೆ ವರ್ತಿಸಿದ್ದರು. ಆದರೆ ಅವರ ಪಕ್ಷದ ನೇತೃತ್ವದ ಉತ್ತರಕಾಂಡ ಸರ್ಕಾರ ಪತಂಜಲಿಯ ಲೈಸನ್ಸ್ ರದ್ದು ಮಾಡಿದೆ. ಉತ್ತರಕಾಂಡ ಸರ್ಕಾರದ ನಿರ್ಧಾರದ ಬಗ್ಗೆ ಮಾತಾಡಲು ಅಶೋಕ್‌ರವರಿಗೆ ಈಗ ತಾಕತ್ತಿದೆಯೇ.? ಎಂದಿದ್ದಾರೆ.