ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೀತಾ ಇದೆ

Advertisement

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ ನಡೆಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿರುವ ಡಿ.ಕೆ. ಶಿವಕುಮಾರ ಅವರು ಕಿರುಕುಳ ಕೊಡಲು‌ ನೋಟಿಸ್ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೀತಾ ಇದೆ ಎಂದು ಆರೋಪಿಸಿದ್ದಾರೆ.
ನನ್ನ ಮಕ್ಕಳು, ಹೆಂಡತಿಗೆ ನೋಟಿಸ್ ಕಳಿಸಲಾಗಿದೆ. ವೈಯಕ್ತಿಕವಾಗಿ ನೋಟಿಸ್ ಬಂದಿಲ್ಲ. ಸರ್ಕಾರ ಸಿಬಿಐಗೆ ಕೊಟ್ಟ ಅನುಮತಿ ಹಿಂಪಡೆದಿದೆಯಾದರೂ ಕೂಡ ಯಾವ ಲೆಕ್ಕಾಚಾರದಲ್ಲಿ ನೋಟಿಸ್ ಕೊಟ್ಟಿದ್ದಾರೋ ಗೊತ್ತಿಲ್ಲ. ಈ ಪ್ರಕರಣದಲ್ಲಿ ಸರ್ಕಾರ ಅನುಮತಿ ಹಿಂಪಡೆದಿದೆ. ಆ ಪ್ರಕಾರ ಎಲ್ಲಾ ದಾಖಲೆಗಳನ್ನು ಅವರು ಲೋಕಾಯುಕ್ತಕ್ಕೆ ಕೊಡಬೇಕು. ನನಗೆ ಇರುವ ಕಾನೂನಿನ ಜ್ಞಾನ ಇದು. ಈಗ ಕಿರುಕುಳ ನೀಡೋಕೆ ಅಲ್ಲಿ ಇರುವ ದೊಡ್ಡದೊಡ್ಡ ಜನ ಈ ರೀತಿ ಮಾಡುತ್ತಿದ್ದಾರೆ. ಅದೆಲ್ಲಾ ನನಗೆ ಗೊತ್ತಿದೆ. ಅವರು ಏನು ಬೇಕಾದರೂ ತನಿಖೆ ಮಾಡಲಿ. ಎಲ್ಲಿ ನನಗೆ ನ್ಯಾಯ ಸಿಗಬೇಕೋ ಅಲ್ಲಿ ಸಿಗುತ್ತದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು.